ಕುಶಾಲನಗರ, ಫೆ.14: ಇಲ್ಲಿಗೆ ಸಮೀಪದ 7 ನೇ ಹೊಸಕೋಟೆಯ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ಕೆ. ಮಂಜಪ್ಪ (51) ಮಂಗಳವಾರ ಸಂಜೆ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಕುಶಾಲನಗರದ ಸರಕಾರಿ ಆಸ್ಪತ್ರೆಯಲ್ಲಿ ಫ್ರಥಮ ಚಿಕಿತ್ಸೆ ನಡೆಸಿ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಆಸ್ಪತ್ರೆಗೆ ತೆರಳುವ ಸಂದರ್ಭ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಕ್ಷೇತ್ರ ಸಮನ್ವಯಾಧಿಕಾರಿ, ಮಾಲತಿ, ಶಿಕ್ಷಕರ ಸಂಘದ ಪದಾಧಿಕಾರಿಗಳು, ಪಧವೀದರ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂಘದ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.