ಮಡಿಕೇರಿ, ಫೆ. 15: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ವರ್ಷಾಚಾರಣೆ ಪ್ರಯುಕ್ತ ಗಾಂಧೀಜಿ ಅವರ ಬದುಕು-ಸಾಧನೆ ಬಿಂಬಿಸುವ ‘ಧ್ವನಿ ಬೆಳಕು’ ಕಾರ್ಯಕ್ರಮ ತಾ. 16 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಇತರರು ಭಾಗವಹಿಸಲಿದ್ದಾರೆ.