ಸಿದ್ದಾಪುರ, ಫೆ. 15: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿ ಕಾಲೋನಿ ರಸ್ತೆಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿ ಕಾಲೋನಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನದಲ್ಲಿ ರೂ. 10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ, ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೂ. 3 ಕೋಟಿ ಅನುದಾನದಲ್ಲಿ ಕಾಮಾಗಾರಿಗಳು ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭ ಗ್ರಾ.ಪಂ. ಸದಸ್ಯರು ಹಾಗೂ ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಬಿ.ಜೆ.ಪಿ. ಮುಖಂಡರುಗಳಾದ ಪಿ.ಸಿ. ಅಚ್ಚಯ್ಯ, ಕೆ.ಟಿ. ಶಾಜಿ ಹಾಗೂ ಇತರರು ಹಾಜರಿದ್ದರು.