ಮಡಿಕೇರಿ, ಫೆ. 17: ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯತೀತ ಜತನಾದಳದ ಅಭ್ಯರ್ಥಿ ಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಿಂದ ಮಡಿಕೆರಿ ಕ್ಷೇತ್ರದ ಅಭ್ಯರ್ಥಿಗಳಾಗಿ ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿಯಾಗಿ ಮೇರಿಯಂಡ ಸಂಕೇತ್ ಪೂವಯ್ಯ ಅವರನ್ನು ಅಭ್ಯರ್ಥಿಗಳನ್ನಾಗಿ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಯಲಹಂಕದಲಿ ನಡೆದ ‘ವಿಕಾಸ ಪರ್ವ’ ಸಮಾವೇಶದಲ್ಲಿ ಅಭ್ಯರ್ಥಿಗಳ ಘೋಷಣೆಯಾಗಿದೆ.ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್.ಪಿ. ನಾಯಕಿ ಮಾಯಾವತಿ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.