ಕುಶಾಲನಗರ, ಫೆ. 17: ದುಬಾರೆ ರ್ಯಾಫ್ಟಿಂಗ್ ಸಂದರ್ಭ ಪ್ರವಾಸಿಗರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಹೈದರಾಬಾದ್‍ನಿಂದ ಪ್ರವಾಸಕ್ಕೆಂದು ಬಂದ ಸಂದರ್ಭ ರ್ಯಾಫ್ಟಿಂಗ್ ಗೈಡ್‍ಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ರಜಿ ಅಹಮ್ಮದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ತಿಳಿಸಿದ್ದಾರೆ. ಉಳಿದಂತೆ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಹೈದರಾಬಾದ್‍ಗೆ ತೆರಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.