ಗೋಣಿಕೊಪ್ಪಲು, ಫೆ. 16: ಯುವ ಜನಾಂಗ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಮೂಕಳೇರ ಆಶಾ ಪೂಣಚ್ಚ ಹೇಳಿದರು.ನೆಹರೂ ಯುವ ಕೇಂದ್ರ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ ಅರುವತ್ತೊಕ್ಕಲು ಪಿಹೆಚ್‍ಎಸ್ ಕಾಲೋನಿ ಪ್ರತಿಭಾ ಯುವಕ ಸಂಘ ಜಂಟಿಯಾಗಿ ಆಯೋಜಿಸಿದ್ದ ನೆರೆಹೊರೆ ಸಂಬಂಧಗಳು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಶಾಂತಿ-ಸಾಮರಸ್ಯ ಕಾಪಾಡಬೇಕಾದರೆ ಯುವ ಜನಾಂಗ ವಿಶಾಲವಾಗಿ ಚಿಂತಿಸಬೇಕು. ಜಾತಿ ಮತಗಳ ಬಗ್ಗೆ ಚಿಂತಿಸದೆ ತಮ್ಮ ಕರ್ತವ್ಯ ನಿರ್ವಹಣೆ ಬಗ್ಗೆ ಚರ್ಚಿಸಬೇಕು ಎಂದು ತಿಳಿಸಿದರು.