ಮಡಿಕೇರಿ, ಫೆ. 17: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ವತಿಯಿಂದ ಏ.17ರಂದು ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಬಿಸು ಪರ್ಬ-2018 ಎಂಬ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ತುಳುವೆರ ಜನಪದ ಕೂಟದ ಸಭೆಯಲ್ಲಿ ತೀರ್ಮಾನಿಸಲಾಯಿತು. ಹೊಟೇಲ್ ಸಮುದ್ರಹಾಲ್ ಸಭಾಂಗಣದಲ್ಲಿ ಇತ್ತೀಚೆಗೆ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಬಿ.ಬಿ. ಐತಪ್ಪ ರೈ ಅವರ ಅಧ್ಯಕ್ಷತೆಯಲ್ಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ತುಳು ಭಾಷಿಕ ಸಮುದಾಯಕ್ಕೆ ಬಿಸು ಹಬ್ಬವು ಪ್ರಮುಖ ಹಬ್ಬವಾಗಿದ್ದು, ಹೊಸ ವರ್ಷವು ಬಿಸು ಹಬ್ಬದಿಂದ ಪ್ರಾರಂಭವಾಗುವದರಿಂದ ಈ ಹಬ್ಬವನ್ನು ವರ್ಷಂಪ್ರತಿ ಆಚರಿಸು ವಂತಾಗಬೇಕೆಂದು ಪ್ರಮುಖರು ಸಲಹೆ ನೀಡಿದರು. ಕಾರ್ಯಕ್ರಮಕ್ಕೆ ರಾಜ್ಯದ ಪ್ರಮುಖ ಸ್ವಾಮೀಜಿ ಮತ್ತು ಬಿಸು ಪರ್ಬ ಹಬ್ಬದ ಮಹತ್ವದ ಬಗ್ಗೆ ಉಪನ್ಯಾಸ ನೀಡುವವರನ್ನು ಆಹ್ವಾನಿ ಸುವ ಬಗ್ಗೆ ತೀರ್ಮಾನಿಸಲಾಯಿತು.
ಮಧ್ಯಾಹ್ನ ಸಾಂಪ್ರದಾಯಿಕ ಆಹಾರ, ಮಧ್ಯಾಹ್ನದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಸುವಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ವಿವಿಧ ಉಪ ಸಮಿತಿಗಳ ಅಧ್ಯಕ್ಷರು, ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ವೇದಿಕೆಯಲ್ಲಿ ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಅಧ್ಯಕ್ಷ ಶೇಖರ್ ಭಂಡಾರಿ, ಉಪಾಧ್ಯಕ್ಷರಾದ ಬಿ.ವೈ. ಆನಂದ ರಘು, ಬಿ.ಡಿ. ನಾರಾಯಣ ರೈ, ಜಿಲ್ಲಾ ಸಲಹೆಗಾರ ನಾಣಯ್ಯ ಎಂ.ಡಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪಿ.ಎಂ., ಗೌರವ ಸಲಹೆಗಾರ ಬಾಲಕೃಷ್ಣ ರೈ ಉಪಸ್ಥಿತರಿದ್ದರು.
ಸಭೆಯಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷ ಪ್ರಭು ರೈ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಪ್ಪ ಡಿ., ರಮೇಶ್ ಆಚಾರ್ಯ, ಮಡಿಕೇರಿ ನಗರ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ರವಿಶೆಟ್ಟಿ, ಹಾಕತ್ತೂರು ವಲಯ ಅಧ್ಯಕ್ಷ ಬಿ.ಎನ್. ಪ್ರಸಾದ್, ಶನಿವಾರಸಂತೆ ಹೋಬಳಿ ಅಧ್ಯಕ್ಷ ದಯಾನಂದ, ಸಂದ್ಯಾಗಣೇಶ್, ರವಿ ಆರ್.ಬಿ., ಸತೀಶ್ ಕುಂದರ್, ಜಯಪ್ಪ ಬಿ.ಎಸ್. ಇನ್ನಿತರರು ಹಾಜರಿದ್ದರು.