ವೀರಾಜಪೇಟೆ, ಫೆ. 17: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸುವÀ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವೀಕ್ಷಕ ಬಾಲರಾಜ್ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪದಾಧಿಕಾರಿ ಗಳೊಂದಿಗೆ ಸೆರಿನಿಟಿ ಹಾಲ್‍ನಲ್ಲಿ ಸಮಾಲೋಚನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ, ಕರ್ನಾಟಕ ಅರಣ್ಯ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷೆ ತಾರಾ ಅಯ್ಯಮ್ಮ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.