ಚೆಟ್ಟಳ್ಳಿ, ಫೆ. 16: ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಮಂಜುನಾಥ್ ಚೆಟ್ಟಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ತಮ್ಮ ಅನುದಾನದಲ್ಲಿ ನಡೆಯುತ್ತಿರುವ ತಡೆಗೋಡೆ, ಕತ್ತಲೆಕಾಡು-ಚೆಟ್ಟಳ್ಳಿ ರಸ್ತೆಯ ಗುಂಡಿ ಮುಚ್ಚುವ ಕಾರ್ಯವನ್ನು ವೀಕ್ಷಿಸಿದರು. ನಂತರ ಮಾತನಾಡಿದ ಅವರು, ಕತ್ತಲೆಕಾಡಿನಿಂದ ಚೆಟ್ಟಳ್ಳಿಯವರೆಗೆ ಇರುವ ರಸ್ತೆಯು ತೀರಾ ತಿರುವಿ ನಿಂದ ಕೂಡಿದ್ದು, ಮಳೆಗಾಲದಲ್ಲಂತೂ ರಸ್ತೆಯು ಹದಗೆಟ್ಟು ಹೋಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕತ್ತಲೆಕಾಡಿನಿಂದ ಚೆಟ್ಟಳ್ಳಿಯವರೆಗೆ ಕಾಂಕ್ರಿಟೀಕರಣಗೊಳಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೂಳಿಸುವದಾಗಿ ಹೇಳಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ವಕ್ತಾರ ಪುತ್ತರಿರ ಪಪ್ಪು ತಿಮ್ಮಯ್ಯ, ಗ್ರಾ.ಪಂ. ಸದಸ್ಯ ಮಹಮ್ಮದ್ ರಫಿ ಉಪಸ್ಥಿತರಿದ್ದರು.