ಮಡಿಕೇರಿ, ಫೆ. 16: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಎಲಿಯಂಗಾಡ್ ಫ್ರೆಂಡ್ಸ್ ಯುವ ಸಂಘ, ಕೊಡಗು ವಾಲಿಬಾಲ್ ಸಂಸ್ಥೆ ಹಾಗೂ ಕೊಂಡಂಗೇರಿಯ ಬುಲೈಟ್ ಫ್ರೆಂಡ್ಸ್ ಆಶ್ರಯದಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಕೊಂಡಂಗೇರಿ ಶಾಲಾ ಮೈದಾನದಲ್ಲಿ ತಾ. 18 ರಂದು ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಲೈಟ್ ಫ್ರ್ರೆಂಡ್ಸ್ ಸಂಘದ ಪದಾಧಿಕಾರಿಗಳು, ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಹತ್ತು ತಂಡಗಳ ನಡುವೆ ಹಣಾಹಣಿ ನಡೆಯಲಿದ್ದು, ವಾಲಿಬಾಲ್ ಪಂದ್ಯಾವಳಿಯ ಮೂಲಕ ಸ್ಥಳೀಯ ಗ್ರಾಮಕ್ಕೆ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪದವಿ ಪೂರ್ವ ಕಾಲೆÉೀಜು ಬೇಕು ಎನ್ನುವ ಬೇಡಿಕೆ ಯನ್ನು ಜನಪ್ರತಿನಿಧಿಗಳ ಮುಂದಿಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಸಮಾರೋಪ ಸಮಾರಂಭ ಸಂಜೆ 5 ಗಂಟೆಗೆ ನಡೆಯಲಿದ್ದು, ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರು ಹಾಗೂ ಕೊಂಡಂಗೇರಿ ಅಬ್ದುಲ್ಲಾಹಿ ಸಖಾಫ್ ಎಜ್ಯುಕೇಷನ್ ಸೆಂಟರ್‍ನ ಅಧ್ಯಕ್ಷ ಕೆ.ಹೆಚ್.ಅಬ್ದುಲ್ ರೆಹೆಮಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಪಂಚಾಯತ್ ಸದಸ್ಯೆ ಸರಿತಾ ಪೂಣಚ್ಚ, ಕೆಪಿಸಿಸಿ ಕಾರ್ಯದರ್ಶಿ ಅರುಣ್ ಮಾಚಯ್ಯ, ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯP ಕೆ.ಎ. ಯಾಕೂಬ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ, ಹಾಲುಗುಂದ ಗ್ರಾ.ಪಂ. ಸದಸ್ಯ ದಿನೇಶ್, ನಾಪೋಕ್ಲು ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್ ಮತ್ತಿತರ ಪ್ರಮುಖರು ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರೆಹೆಮಾನ್, ಪ್ರಮುಖ ರಾದ ಕೆ.ಎಂ.ಸಾದುಲಿ, ಇಬ್ರಾಹಿಂ, ಮೊಯ್ದು, ಸರ್ಫುದ್ದೀನ್ ಹಾಗೂ ಪಿ.ಇ. ಸೈಫ್ ಉಪಸ್ಥಿತರಿದ್ದರು.