ಮಡಿಕೇರಿ, ಫೆ. 17: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳಿಗೆ 2018-19ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ತಾ. 18 ರಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ಉಚ್ಚ ನ್ಯಾಯಾಲಯದ ತಡೆಯಾಜ್ಞೆ ಆದೇಶದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯದೇವಿ ಗಲಿಗಲಿ ತಿಳಿಸಿದ್ದಾರೆ.