ಮಡಿಕೇರಿ, ಫೆ. 18: ಜಿಲಾ ್ಲ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕೇಂದ್ರ ಲೋಕಸೇವಾ ಆಯೋಗವು ಜೂನ್ 2018ರ ಮಾಹೆಯಲ್ಲಿ ನಡೆಸಲು ಉದ್ದೇಶಿಸಿರುವ ನಾಗರಿಕ ಸೇವಾ (ಐ.ಎ.ಎಸ್.) ಪೂರ್ವಭಾವಿ ಪರೀಕ್ಷೆ-2018ಕ್ಕೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ತಾ. 21 ರಿಂದ 28 ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.ಪರೀಕ್ಷಾ ಪೂರ್ವ ತರಬೇತಿಯಲ್ಲಿ ಈ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ, ಬೆಂಗಳೂರು ಇವರು ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿ ನೀಡಲಾಗುವದು. ಪರೀಕ್ಷ್ಷ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ, ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಲು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಜಗನ್ನಾಥ್ ತಿಳಿಸಿದ್ದಾರೆ.