*ಗೋಣಿಕೊಪ್ಪಲು: ಶಾಸಕರ ವಿಶೇಷ ಅನುದಾನದ ರೂ. 4 ಲಕ್ಷ ವೆಚ್ಚದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ಕೋತೂರು ಗ್ರಾಮದ ಕಟ್ಟೇಂಗಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಹಾಗೂ ಮಚ್ಚಮಾಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ, ಕೋತೂರು ಮಹಾವಿಷ್ಣು ದೇವಾಲಯ ಲಿಂಕ್ ರಸ್ತೆ ಕಾಮಗಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಕಾನೂರು ಗ್ರಾ.ಪಂ. ಅಧ್ಯಕ್ಷೆ ಲತಾ ಕುಮಾರಿ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಸದಸ್ಯ ಪ್ರಕಾಶ್, ಗ್ರಾ.ಪಂ. ಸದಸ್ಯ ಸುಳ್ಳಿಮಾಡ ದೀಪಕ್, ಬಿ.ಜೆ.ಪಿ. ಕಾನೂರು ಸ್ಥಾನೀಯ ಸಮಿತಿ ಅಧ್ಯಕ್ಷ ಕಾಡೇಮಾಡ ಮಾಚು, ಜಿಲ್ಲಾ ವರ್ತಕರ ಪ್ರಕೋಷ್ಠ ಅಧ್ಯಕ್ಷ ಗಿರೀಶ್ ಗಣಪತಿ, ತಾಲೂಕು ಬಿ.ಜೆ.ಪಿ. ಮಂಡಳ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಕಾಫಿ ಮಂಡಳಿ ಸದಸ್ಯ ಬೊಟ್ಟಂಗಡ ರಾಜು, ಅಮ್ಮಕೊಡವ ಸಮಾಜದ ಅಧ್ಯಕ್ಷ ಎಂ.ಎ. ರಾಜು, ಮಹಿಳಾ ಅಮ್ಮ ಕೊಡವ ಸಮಾಜದ ಅಧ್ಯಕ್ಷೆ ಎಂ.ಆರ್. ಶ್ವೇತ, ಕಾನೂರು ಪ್ರಾಥಮಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಳಮೇಂಗಡ ವಿವೇಕ್, ತಾಲೂಕು ಫೆಡರೇಷನ್ ಸದಸ್ಯ ಮಲ್ಲಂಡ ಮಧು ದೇವಯ್ಯ, ಕಟ್ಟೇಂಗಡ ಕಾರ್ಯಪ್ಪ, ಸುಜಾ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.ಕೂಡಿಗೆ: ಕುಶಾಲನಗರ ಹೋಬಳಿ ವ್ಯಾಪ್ತಿಯ ಶಿರಂಗಾಲ, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ವಿವಿಧ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ. ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಪುಷ್ಪ, ಕೂಡಿಗೆ ಯುವ ಮೋರ್ಚಾದ ಅಧ್ಯಕ್ಷ ಬೊಮ್ಮಯ್ಯನ ಚಿಣ್ಣಪ್ಪ, ಉಪಾಧ್ಯಕ್ಷ ಧನರಾಜ್, ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಕೆ. ಭೋಗಪ್ಪ, ಆರ್.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಕೂಡುಮಂಗಳೂರು ಬೂತ್ ಸಮಿತಿಯ ಅಧ್ಯಕ್ಷ ಮಂಜುನಾಥ, ಕೂಡಿಗೆ, ಕೂಡುಮಂಗಳೂರು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗಳ ಬಿಜೆಪಿ ಬೆಂಬಲಿತ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು.*ಸಿದ್ದಾಪುರ: ಚೆಟ್ಟಳ್ಳಿ ವ್ಯಾಪ್ತಿಯ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ಗಿರಿಜನರ ಕಾಲೋನಿ ಸ್ಮಶಾನಕ್ಕೆ ತೆರಳುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ರೂ. 10 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ. ಈ ಸಂದರ್ಭ ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಪಂಚಾಯಿತಿ ಸದಸ್ಯರಾದ ರವಿ, ದೇವಿಯಾನಿ, ಸೀತಮ್ಮ, ಬಲ್ಲಾರಂಡ ಕಂಠಿ ಕಾರ್ಯಪ್ಪ, ವಿಎಸ್‍ಎಸ್‍ಎನ್ ಬ್ಯಾಂಕ್ ನಿರ್ದೇಶಕ ಕಣಜಾಲು ಪೂವಯ್ಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯಧು ಕುಮಾರ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಉಪಾಧ್ಯಕ್ಷರುಗಳಾದ ಹೊನ್ನಪ್ಪ, ದಯಾನಂದ ಮತ್ತಿತರರು ಇದ್ದರು.ಸೋಮವಾರಪೇಟೆ: ರಸ್ತೆ ಕಾಮಗಾರಿ ಕೈಗೊಳ್ಳುವ ಸಂದರ್ಭ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭ ಸಾರ್ವಜನಿಕರು ಜಾಗ್ರತೆ ವಹಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು.

ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಕಾಲೋನಿಯಲ್ಲಿ ಎಸ್‍ಇಪಿ ಮತ್ತು ಟಿಎಸ್‍ಪಿ ಯೋಜನೆಯಡಿ ನೂತನವಾಗಿ ನಿರ್ಮಿಸಲ್ಪಡುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಸಂದರ್ಭ ಹರದೂರು ಗ್ರಾ.ಪಂ. ಅಧ್ಯಕ್ಷೆ ಸುಮಾ, ಸದಸ್ಯ ಗೌತಮ್ ಶಿವಪ್ಪ, ಅಭಿಯಂತರ ರಘುನಾಥ್, ಗುತ್ತಿಗೆದಾರ ಪ್ರಶಾಂತ್, ಪ್ರಮುಖರಾದ ಉಲ್ಲಾಸ್, ಕುಶಾಲಪ್ಪ, ಚಿದಾನಂದ, ಚಂದ್ರು, ಹೊಸತೋಟ ಸಲೀಂ ಸೇರಿದಂತೆ ಇತರರು ಉಪಸ್ಥಿತರಿದ್ದರು.*ಗೋಣಿಕೊಪ್ಪಲು: ಮಲೆನಾಡು ಅಭಿವೃದ್ಧಿ ಯೋಜನೆ ಅನುದಾನದಿಂದ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾನೂರು ಗ್ರಾ.ಪಂ. ವ್ಯಾಪ್ತಿಯ ಕೋತೂರು ಗ್ರಾಮದ ಕುಂಞಮಾಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಡಾಂಬರೀಕರಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.