ಸುಂಟಿಕೊಪ್ಪ: ಮಹಾ ಶಿವರಾತ್ರಿ ಅಂಗವಾಗಿ ಶಿವನÀ ದೇವಾಲಯಗಳಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು.

ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಳಗ್ಗಿನಿಂದಲೇ ದೇವಾಲಯದಲ್ಲಿ ಅರ್ಚಕರಾದ ಪ್ರಭಾಕರ ಭಟ್ ಮತ್ತು ಪ್ರಜ್ವಲ್ ಭಟ್ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಹಬ್ಬದ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರೆದಿದ್ದ ನೂರಾರು ಭಕ್ತರಿಗೆ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.

ದೇವಾಲಯ ಸಮಿತಿಯ ಅಧ್ಯಕ್ಷ ಜಯಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಾಬು ಪಳಂಗಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಶಶಿಕಾಂತ್ ರೈ, ಆಡಳಿತ ಮಂಡಳಿಯ ಪದಾಧಿಕಾರಿಗಳು ಇದ್ದರು.ಕೊಡಗರಹಳ್ಳಿ: ಕೊಡಗರಹಳ್ಳಿಯ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲೂ ಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು. ಮುಂಜಾನೆಯಿಂದಲೇ ದೇವಾಲಯದಲ್ಲಿ ಅರ್ಚಕರಾದ ಭಾನುಪ್ರಕಾಶ್ ಭಟ್ ಮತ್ತು ಶೇಷಾದ್ರಿ ಭಟ್ ಅವರ ನೇತೃತ್ವದಲ್ಲಿ ರುದ್ರಾಭಿಷೇಕ, ಭಸ್ಮಾರ್ಚನೆ, ಪಂಚಾಮೃತಾಭಿಷೇಕ, ಎಳನೀರು ಅಭಿಷೇಕ, ಕ್ಷೀರಾಭಿಷೇಕ ನೆರವೇರಿತು.

ಮಧ್ಯಾಹ್ನದ ವೇಳೆ ವಿಶೇಷ ಪೂಜೆಯ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಕೊಕ್ಕಲೇರ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ಬಿ.ಸಿ. ದಿನೇಶ್, ಪದಾಧಿಕಾರಿಗಳಾದ ಜಗ್ಗಾರಂಡ ಕಾರ್ಯಪ್ಪ, ಅಡಿಕೆರ ರಘು, ಅಕ್ಕಪ್ಪಂಡ ಸನ್ನಿ ಕಾರ್ಯಪ್ಪ, ಪಿ.ಕೆ. ಜಗದೀಶ್, ದತ್ತ ಸೋಮಣ್ಣ ಇತರರು ಇದ್ದರು.ಮಡಿಕೇರಿ: ಶಿವರಾತ್ರಿ ಪ್ರಯುಕ್ತ ಮಡಿಕೇರಿಯ ಶ್ರೀ ವಿಜಯ ವಿನಾಯಕ ಭಜನಾ ಮಂಡಳಿಯವರು ಕಾಶೀ ಮಠದಲ್ಲಿ ಭಜನಾ ಕಾರ್ಯ ನೆರವೇರಿಸಿದರು.