ಮಡಿಕೇರಿ, ಫೆ. 19: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ “ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಕಾನೂನು ಶಿಬಿರವು ತಾ. 20 (ಇಂದು) ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪವನೇಶ್ ಡಿ., ಪ್ರಾಂಶುಪಾಲೆ ಡಾ. ಜೆನಿಫರ್ ಲೊಲಿಟ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ವಿಜಯ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ವಕೀಲ ಪಿ.ಕೃಷ್ಣಮೂರ್ತಿ, ಇತರರು ಭಾಗವಹಿಸಲಿದ್ದಾರೆ.