ಮಡಿಕೇರಿ: ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್‍ನಲ್ಲಿ ಮಡಿಕೇರಿ ತಾಲೂಕು, ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಳದಾಳು ಗ್ರಾಮದ ಕರ್ಣಯ್ಯನ ಕಾಲೋನಿ (ಕುರುಂಬುಡಿ)ಯಲ್ಲಿ ರೂ. 6 ಲಕ್ಷಗಳ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರಿಟ್ ರಸ್ತೆಯನ್ನು ಉದ್ಘಾಟನೆ ಮಾಡಿದರು.

ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪಿ. ದಿನೇಶ್, ಪುಲಿಯಂಡ ಜಗದೀಶ್, ಕೆ.ಬಿ. ಸುರೇಶ್, ಕೆ.ಬಿ. ರವಿ, ಮುಕ್ಕಾಟಿರ ಸುಬ್ರಮಣಿ, ಮೊಗೇರನ ಪೊನ್ನಪ್ಪ, ಕೆ.ಪಿ. ರಾಧಾಕೃಷ್ಣ ಇವರುಗಳು ಉಪಸ್ಥಿತರಿದ್ದರು.*ಗೋಣಿಕೊಪ್ಪಲು: ಶಾಸಕರ ವಿಶೇಷ ಅನುದಾನದಿಂದ ಬಿಡುಗಡೆಯಾದ ರೂ. 4 ಲಕ್ಷ ವೆಚ್ಚದಲ್ಲಿ ಮಲ್ಲೇಂಗಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಡಾಂಬರಿಕರಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕಾನೂರು ಗ್ರಾ.ಪಂ. ಅಧ್ಯಕ್ಷೆ ಲತಾ ಕುಮಾರಿ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಸದಸ್ಯ ಪ್ರಕಾಶ್, ಗ್ರಾ.ಪಂ. ಸದಸ್ಯ ಸುಳ್ಳಿಮಾಡ ದೀಪಕ್, ಬಿ.ಜೆ.ಪಿ. ಕಾನೂರು ಸ್ಥಾನೀಯ ಸಮಿತಿ ಅಧ್ಯಕ್ಷ ಕಾಡೇಮಾಡ ಮಾಚು, ಜಿಲ್ಲಾ ವರ್ತಕರ ಪ್ರಕೋಷ್ಠ ಅಧ್ಯಕ್ಷ ಗಿರೀಶ್ ಗಣಪತಿ, ತಾಲೂಕು ಬಿ.ಜೆ.ಪಿ. ಮಂಡಳ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಕಾಫಿ ಮಂಡಳಿ ಸದಸ್ಯ ಬೊಟ್ಟಂಗಡ ರಾಜು, ಅಮ್ಮ ಕೊಡವ ಸಮಾಜದ ಅಧ್ಯಕ್ಷ ಎಂ.ಎ. ರಾಜು, ಮಹಿಳಾ ಅಮ್ಮ ಕೊಡವ ಸಮಾಜದ ಅಧ್ಯಕ್ಷೆ ಎಂ.ಆರ್. ಶ್ವೇತ, ಕಾನೂರು ಪ್ರಾಥಮಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಳಮೇಂಗಡ ವಿವೇಕ್, ತಾಲೂಕು ಫೆಡರೇಷನ್ ಸದಸ್ಯ ಮಲ್ಲಂಡ ಮಧು ದೇವಯ್ಯ, ಗ್ರಾಮಸ್ಥ ರಿವನ್ ಹಾಗೂ ಗ್ರಾಮಸ್ಥರು ಹಾಜರಿದ್ದರು.ಸುಂಟಿಕೊಪ್ಪ: ಪರಿಶಿಷ್ಟ ಜಾತಿ ಪಂಗಡದವರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ರೂ. 3 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಪಂಪ್‍ಹೌಸ್ ರಸ್ತೆಯ ಅಂಬೇಡ್ಕರ್ ಕಾಲೋನಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ-ಪಂಗಡದವರ ಹೆಚ್ಚಾಗಿ ನೆಲೆಸಿರುವ ಪ್ರದೇಶದಲ್ಲಿ ರಸ್ತೆ, ಒಳಚರಂಡಿ ನಿರ್ಮಿಸಲು ಕೇಂದ್ರ ಸರಕಾರದಿಂದ ರೂ. 1 ಕೋಟಿ 10 ಲಕ್ಷ ಹಾಗೂ ರಾಜ್ಯ ಸರಕಾರದಿಂದ ರೂ. 2 ಕೋಟಿ ಲಭ್ಯವಾಗಿದೆ. ರಸ್ತೆ ಹಾಗೂ ಚರಂಡಿ ಕಾಮಗಾರಿ ಉತ್ತಮ ಗುಣಮಟ್ಟದಿಂದ ನಿರ್ಮಿಸಬೇಕು. ಈ ಬಗ್ಗೆ ಸ್ಥಳೀಯ ನಾಗರಿಕರು, ಜನಪ್ರತಿನಿಧಿಗಳು ಕಾಮಗಾರಿ ನಿರ್ವಹಿಸುವಾಗ ಖುದ್ದು ಪರಿಶೀಲಿಸಬೇಕೆಂದು ಹೇಳಿದರು.

ಕೊಡಗರಹಳ್ಳಿ, ಹೊಸಕೋಟೆ, ಕೆದಕಲ್, ಹಾಲೇರಿ, ಕೂಡ್ಲೂರು, ಚೆಟ್ಟಳ್ಳಿ ಸುಂಟಿಕೊಪ್ಪ, ಶಿರಂಗಾಲ, ತೊರೆನೂರು, ಕೊಡ್ಲಿಪೇಟೆ, ಮುಳ್ಳುಸೋಗೆ, ಗುಡ್ಡೆಹೊಸೂರು, ಕೂಡುಮಂಗಳೂರು ವಿಭಾಗದಲ್ಲಿ ಪರಿಶಿಷ್ಟ ಜಾತಿ-ಪಂಗಡದವರ ಕಾಲೋನಿಗಳ ರಸ್ತೆ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಬಿ.ಕೆ. ಪ್ರಶಾಂತ್, ನಾಗೇಶ್ ಪೂಜಾರಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ, ಮಾಜಿ ಉಪಾಧ್ಯಕ್ಷ ಬಿ.ಕೆ. ಮೋಹನ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಪೀಟರ್ ಮತ್ತಿತರರು ಇದ್ದರು.