ಭಾಗಮಂಡಲ, ಫೆ. 19: ಅರಣ್ಯ ಉಳಿಸುವದರೊಂದಿಗೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗ ಬೇಕು ಎಂದು ಕರ್ನಾಟಕ ಅರಣ್ಯ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಹೇಳಿದರು.

ಭಾಗಮಂಡಲ ಅರಣ್ಯ ಕಚೇರಿ ಯಲ್ಲಿ ಪರಿಶಿಷ್ಟ ಜಾತಿ-ಪಂಗಡದ ಆಯ್ದ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌ ವಿತರಿಸಿ ಮಾತನಾಡಿದರು. ಅರಣ್ಯ ಉಳಿಯ ಬೇಕಾದರೆ ಅರಣ್ಯದಂಚಿನ ಜನರ ಸಹಕಾರ ಮುಖ್ಯವಾಗಿ ಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಮುರಳಿ ಕರುಂಬಮ್ಮಯ್ಯ ಮಾತನಾಡಿ, ಜನತೆ ಆರ್ಥಿಕವಾಗಿ ಸಬಲತೆ ಹೊಂದಿದ್ದಲ್ಲಿ ನಮ್ಮ ದೇಶ ಮುಂದುವರೆಯಲು ಸಾಧ್ಯ ಎಂದರು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಮಾತನಾಡಿ, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಭಾಗಮಂಡಲ ವಲಯ ಅರಣ್ಯಾಧಿಕಾರಿ ಚೆಂಗಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಕುಮಾರ, ತಾಲೂಕು ಪಂಚಾಯ್ತಿ ಸದಸ್ಯರಾದ ಕೋಡಿಯಂಡ ಇಂದಿರಾ ಹರೀಶ್, ಸಂಧ್ಯಾ, ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೆಟ್ಟಿಮಾನಿಯ ಹ್ಯಾರೀಸ್, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸದಸ್ಯರಾದ ದೇವಯ್ಯ, ಮುತ್ತಪ್ಪ, ಧರಣಿ, ಅರಣ್ಯಾಧಿಕಾರಿಗಳಾದ ಅಮೃತೇಶ್, ಶಶಿ, ಸುರೇಶ್, ಇನ್ನಿತರರು ಉಪಸ್ಥಿತರಿದ್ದರು.