ಮಡಿಕೇರಿ, ಫೆ.19 : 2018 ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯನ್ನು ತಾ. 21ರಂದು ಬೆಳಿಗ್ಗೆ 6 ಗಂಟೆಯಿಂದ ತಾ. 23ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳ ಕಾಲ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಸಲಾಗುವದು. ಗಣತಿ ಕಾರ್ಯ ನಡೆಯುವ ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಈ ಗಣತಿ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಸಮೀಕ್ಷೆಗೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.