ಮಡಿಕೇರಿ, ಫೆ.20 : ಕಡಗದಾಳುವಿನ ಬೊಟ್ಲಪ್ಪ ಯುವ ಸಂಘ ರಚನೆಗೊಂಡು 25 ವರ್ಷಗಳು ತುಂಬಿದ್ದು, ಬೆಳ್ಳಿ ಮಹೋತ್ಸವದ ಸಂಭ್ರಮದ “ಬೆಳ್ಳಿ ಬೆಳಕು 1993-2018”, ಕ್ರೀಡೋತ್ಸವ ಹಾಗೂ ಸಮಾರೋಪ ಸಮಾರಂಭ ತಾ.23 ಮತ್ತು 24 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು ಎರಡು ದಿನಗಳ ಕಾಲ ನಡೆಯುವ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ತಾ. 23 ರಂದು ಬೆಳಿಗ್ಗೆ 9 ಗಂಟೆಗೆ ನೀರುಕೊಲ್ಲಿ ಅಂಗನವಾಡಿ ಕೇಂದ್ರದಿಂದ ರಸ್ತೆ ಓಟ ಆಯೋಜಿಸಲಾಗಿದ್ದು, ಕಡಗದಾಳು ಗ್ರಾ.ಪಂ. ಸದಸ್ಯ ರಮೇಶ್ ಆಚಾರಿ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಶ್ರೀ ಬೊಟ್ಲಪ್ಪ ಯುವ ಸಂಘದ ಸಲಹಾ ಸಮಿತಿ ಸದಸ್ಯ ಅಂತೋಣಿ ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಬೆಳಿಗ್ಗೆ 10.30ಕ್ಕೆ ಕಡಗದಾಳುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾಟವನ್ನು ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಮ್ಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನೀಲಮ್ಮ ಹಾಗೂ ಬೊಟ್ಲಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಸಲಹಾ ಸಮಿತಿ ಸದಸ್ಯ ಕಿಶೋರ್ ರೈ ಭಾಗವಹಿಸಲಿದ್ದಾರೆ.

ಶ್ರೀ ಬೊಟ್ಲಪ್ಪ ಯುವ ಸಂಘ ಉಪಾಧ್ಯಕ್ಷೆ ಕೆ.ಬಿ.ದಮಯಂತಿ ಅವರ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ಯೋಧರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶ್ರೀ ಬೊಟ್ಲಪ್ಪ ಯುವÀ ಸಂಘದ ಬೆಳ್ಳಿ ಮಹೋತ್ಸವ ಸಮಿತಿಯ ಸದಸ್ಯ ಎಂ.ಪಿ. ಬೆಳ್ಯಪ್ಪ ಯೋಧರನ್ನು ಸನ್ಮಾನಿಸಲಿದ್ದಾರೆ. ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಘದ ಉಪಾಧ್ಯಕ್ಷ ಪಿ.ಎಂ.ಸುರೇಶ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆ. 24 ರಂದು ಸಂಜೆ 4 ಗಂಟೆಗೆ ಕಡಗದಾಳು, ಬೋಯಿಕೇರಿ ರಸ್ತೆ ಮಾರ್ಗವಾಗಿ ಕಲಾತಂಡಗಳ ಮೆರವಣಿಗೆ ಹೊರಡಲಿದ್ದು, ಸಂಘದ ಸಂಚಾಲಕ ಬಿ.ಡಿ.ನಾರಾಯಣ ರೈ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಸಂಘದ ಸಲಹಾ ಸಮಿತಿ ಸದಸ್ಯ ಟಿ.ಆರ್. ವಾಸು ಹಾಗೂ ಕಡಗದಾಳು ದೇವಸ್ಥಾನ ಸಮಿತಿಯ ತಕ್ಕಮುಖ್ಯಸ್ಥ ಎಂ.ಸಿ. ಸೋಮಯ್ಯ ಭಾಗವಹಿಸಲಿದ್ದಾರೆ.

6 ಗಂಟೆಗೆ ಶಾಲಾ ಮೈದಾನದಲ್ಲಿ ಕಡಗದಾಳು ಗ್ರಾ.ಪಂ ಉಪಾಧ್ಯಕ್ಷ ಎಂ.ಪಿ. ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ.

ವೀಣಾ ಅಚ್ಚಯ್ಯ ಅವರು ಸ್ಮರಣ ಸಂಚಿಕೆ ಮುಖಪುಟ ಅನಾವರಣಗೊಳಿಸಲಿದ್ದು, ಮಡಿಕೇರಿ ತಾ.ಪಂ. ಸದಸ್ಯ ಬಿ.ವೈ.ರವೀಂದ್ರ (ಅಪ್ರು), ಬೊಟ್ಲಪ್ಪ ಯುವ ಸಂಘದ ಅಧ್ಯಕ್ಷ ಸಿ.ಕೆ.ಮಂಜು ಭಾಗವಹಿಸಲಿದ್ದಾರೆ ಎಂದು ಪ್ರಮುಖರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆ. ಅವಿನಾಶ್, ಕ್ರೀಡಾ ಸಮಿತಿ ಕಾರ್ಯದರ್ಶಿ ಕೆ.ವಿ. ಆದಿತ್ಯ, ಆರ್ಥಿಕ ಸಮಿತಿ ಅಧ್ಯಕ್ಷ ಬಿ.ಎಂ. ಶಿವಕಾಂತ್, ಪ್ರಮುಖ ಎನ್.ಸಿ. ಸುನಿಲ್ ಹಾಗೂ ಮಾಜಿ ಅಧ್ಯಕ್ಷ ಕೆ.ಪಿ.ತಿಮ್ಮಯ್ಯ ಉಪಸ್ಥಿತರಿದ್ದರು.