ನಾಪೋಕ್ಲು, ಫೆ. 20: ನಾಪೋಕ್ಲುವಿನ ಡೆಕ್ಕನ್ ಯೂತ್ ಕ್ಲಬ್ ಆಶ್ರಯದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ತಾ. 21 ರಂದು (ಇಂದು) ರಾತ್ರಿ 8 ಗಂಟೆಗೆ ನಡೆಯಲಿದೆ. ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹರೀಶ್ ಬೋಪಣ್ಣ, ವಕ್ಫ್‍ಬೋರ್ಡ್ ಅಧ್ಯಕ್ಷ ಎಂ.ಎಚ್. ಅಬ್ದುಲ್ ರಹಿಮಾನ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ, ಬೆಂಗಳೂರಿನ ಉದ್ಯಮಿ ಅರೆಯಡ ಪವಿನ್ ಪೊನ್ನಣ್ಣ, ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಮನ್ಸೂರ್ ಆಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.