ಮಡಿಕೇರಿ, ಫೆ. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಘಟಕ, ಸುಳ್ಯದ ಮಹಿಳಾ ಸಮ್ಮಿಲನಾ ವ್ಯವಸ್ಥಾಪನಾ ಸಮಿತಿ ಮತ್ತು ಕೊಡಗು ಜನಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಮಹಿಳಾ ಸಮ್ಮಿಲನ ಕಾರ್ಯಕ್ರಮದ ಪ್ರಯುಕ್ತ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕಿನ ಸ್ವಸಹಾಯ ಸಂಘದ ಮಹಿಳೆಯರಿಗೆ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಕ್ರೀಡಾಕೂಟ ನಗರದ ಗಾಂಧಿ ಮೈದಾನದಲ್ಲಿ ನಡೆಯಿತು.

ಜನ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಬಾನಂಗಡ ಅರುಣ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಸಮ್ಮಿಲನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೀಲಾ ಶೇಷಮ್ಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯೋಜನೆಯ ಯೋಜನಾಧಿಕಾರಿ ಸದಾಶಿವ ಗೌಡ, ಮಹಿಳಾ ಸಮ್ಮಿಲನದ ಪದಾಧಿಕಾರಿ ಪ್ರಮೀತಾ, ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಹಗ್ಗಜಗ್ಗಾಟ, ಲಗೋರಿ, ಸಂಗೀತ ಖುರ್ಚಿ, ಜನಪದ ನೃತ್ಯ, ರಸಪ್ರಶ್ನೆ, ಹೂಗುಚ್ಚ, ರಂಗೋಲಿ, ವೀರ ಮಹಿಳೆಯರ ಸ್ಪರ್ಧೆ ಸೇರಿದಂತೆ ವಿವಿಧ ಆಟೋಟಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧಿಗಳು ಗಮನ ಸೆಳೆದರು.