ಆಲೂರು-ಸಿದ್ದಾಪುರ, ಫೆ. 20: ರಕ್ತದಾನ ಮಾಡುವದ್ದರಿಂದ ವ್ಯಕ್ತಿಯ ಆರೊಗ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಅಭಿಪ್ರಾಯ ಪಟ್ಟರು.

ಅವರು ಗೋಣಿಮರೂರು ಬಸವೇಶ್ವರ ಸಮುದಾಯ ಭವನದಲ್ಲಿ, ಗೋಣಿಮರೂರು ಮತ್ತು ಗಣಗೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಹಾಗೂ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಎಸ್.ಬಿ. ಶಿವಪ್ರಕಾಶ್ ಮಾತನಾಡಿ, ರಕ್ತದಾನ ಮಾಡುವದ್ದರಿಂದ ವ್ಯಕ್ತಿಯಲ್ಲಿ ಮಾನಸಿಕ ಉಲ್ಲಾಸ ಹೆಚ್ಚಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯ ಕೆಂಪರಾಜ್, ಹೆಬ್ಬಾಲೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ವಿನೋದ್ ಕುಮಾರ್, ಗೋಣಿಮರೂರು ಸಂಘದ ಸೇವಾ ಪ್ರತಿನಿಧಿ ಸರೋಜ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಪದಾಧಿಕಾರಿಗಳು ಹಾಜರಿದ್ದರು.