ಮಡಿಕೇರಿ, ಫೆ.21 : ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ ಕ್ರಾಂತಿ ಸಂಘಟನೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಭೋವಿ ಜನಾಂಗದ ಐಕ್ಯತಾ ಸಮಾವೇಶ ಮತ್ತು ಭೋವಿ ಸಮುದಾಯದ ಆದಿ ಗುರುಗಳಾದ ಶ್ರೀ ಸಿದ್ಧರಾಮೇಶ್ವರರ 846ನೇ ಜಯಂತ್ಯೋತ್ಸವ ಕಾರ್ಯಕ್ರಮ ತಾ.23 ರಂದು ನಗರದ ಕಾವೇರಿ ಹಾಲ್ನಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಡಿ.ಸುಜಿತ್ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ ಕ್ರಾಂತಿಯ ರಾಜ್ಯಾಧ್ಯಕ್ಷರು ಹಾಗೂ ವಕೀಲ ವೈ.ಕೊಟ್ರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೆಪಂಡ ಸುನಿಲ್ ಸುಬ್ರಮಣಿ, ಐ.ಎಎನ್.ಟಿ.ಯು.ಸಿ. ರಾಜ್ಯ ಉಪಾಧ್ಯಕ್ಷÀ ನಾಪಂಡ ಮುತ್ತಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವಿ.ವಿ.ಭಾರತೀಶ್, ತಾಲೂಕು ಪಂಚಾಯ್ತಿ ಅಧ್ಯಕ್ಷೆ ತೆಕ್ಕಡೆ ಶೋಭಾಮೋಹನ್, ಕೆಪಿಸಿಸಿ ಕಾರ್ಯದರ್ಶಿ ಅರುಣ್ಮಾಚಯ್ಯ ಸೇರಿದಂತೆ ಜಿ.ಪಂ. ಹಾಗೂ ತಾ.ಪಂ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಭೋವಿ ರಾಜ್ಯ ಗೌರವ ಸಲಹೆಗಾರ ಜಿ.ವಿ.ಸೀತಾರಾಮ್ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ.ಎ.ಜೀವಿಜಯ, ರಾಜ್ಯ ಉಚ್ಚ ನ್ಯಾಯಾಲಯದ ನಿಕಟ ಪೂರ್ವ ಸರ್ಕಾರಿ ಅಭಿಯೋಜಕ ಹೆಚ್.ಎಸ್.ಚಂದ್ರಮೌಳಿ, ಜಿಲ್ಲಾಧಿಕಾರಿ ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿರುವರು ಎಂದು ಡಿ.ಸುಜಿತ್ ಮಾಹಿತಿ ನೀಡಿದ್ದಾರೆ.