ಬೆಂಗಳೂರು, ಫೆ. 21: ಇಲ್ಲಿನ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿದ್ದು, ಇತ್ತೀಚೆಗೆ ನಿವೃತ್ತರಾದ ಕೊಕ್ಕೇಂಗಡ ಬಿ. ಚಂಗಪ್ಪ ಅವರನ್ನು ರಾಜ್ಯಪಾಲರು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿದ್ದಾರೆ.ಇವರು 2002ರಲ್ಲಿ ಕರ್ನಾಟಕ ಶ್ರೇಷ್ಠ ನ್ಯಾಯಾಲಯದಿಂದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು, ಬೆಂಗಳೂರು, ಮಂಗಳೂರು, ಉಡುಪಿ, ಕಲಬುರ್ಗಿ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿಯೂ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿಯೂ, ರಾಜ್ಯ ಸರಕಾರದ ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ರಾಜ್ಯ ಸರಕಾರದ ಈ ತ್ರಿಸದಸ್ಯ ಆಯೋಗವನ್ನು ಪುನರ್ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಹೈಕೋರ್ಟ್ ನಿವೃತ್ತ ಪ್ರಧಾನ ನ್ಯಾಯಮೂರ್ತಿ ಡಿ.ಹೆಚ್. ವಗೇಲ ಮತ್ತು ಇನ್ನೊಬ್ಬ ಸದಸ್ಯರಾಗಿ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಆರ್.ಕೆ. ದತ್ತ (ಐ.ಪಿ.ಎಸ್). ಇದ್ದಾರೆ.