ಸೋಮವಾರಪೇಟೆ,ಫೆ.20: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬಳ್ಳಾರಿ ಜಿಲ್ಲಾಡಳಿತ, ಜಿ.ಪಂ. ಇವುಗಳ ಸಂಯುಕ್ತಾಶ್ರಯದಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಜಿಲ್ಲೆಯ ಮಿಲನ ಭರತ್ ಅವರಿಗೆ ಮೂರು ಚಿನ್ನದ ಪದಕ ದೊರೆತಿದೆ.(ಮೊದಲ ಪುಟದಿಂದ) ಭರತ ನಾಟ್ಯ, ಒಡಿಸ್ಸಿ ಮತ್ತು ಕೂಚುಪುಡಿ ನೃತ್ಯ ವಿಭಾಗದಲ್ಲಿ ಭಾಗಹಿಸಿದ ಮಿಲನ ಭರತ್ ಅವರು, ಮೂರು ವಿಭಾಗದಲ್ಲೂ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಳೆದ ಬಾರಿಯೂ ಈ ಮೂರೂ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದ ಮಿಲನ ಭರತ್ ಅವರು, ಸೋಮವಾರಪೇಟೆ ತಾಲೂಕು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.