ಮಡಿಕೇರಿ, ಫೆ. 22: ಮಡಿಕೇರಿ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣಾವತಿಯಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ತಾ. 23 ರಂದು (ಇಂದು) ನಗರದ ಪ್ರವಾಸಿ ಮಂದಿರದಲ್ಲಿ, 26 ರಂದು ಸೋಮವಾರಪೇಟೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಹಾಗೂ 28 ರಂದು ವೀರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಭೆ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ ಕಾನ್ವೆಂಟ್ ಜಂಕ್ಷನ್, ಮಡಿಕೇರಿ 571201(08272-222100,9480806225) ಸಂಪರ್ಕಿಸಬಹುದು.