ಶನಿವಾರಸಂತೆ, ಫೆ. 22: ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಲಿ ಕಾರ್ಮಿಕ ವ್ಯಕ್ತಿ ಹಾಸನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಸಮೀಪದ ಮಾಲಂಬಿ ಗ್ರಾಮದ ಸುರೇಂದ್ರ (35) ಮೃತಪಟ್ಟ ಕೂಲಿ ಕಾರ್ಮಿಕ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ತಾ. 19 ರಂದು ವಿಷ ಸೇವನೆ ಮಾಡಿದ್ದರು. ಶನಿವಾರಸಂತೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಹಾಸನದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ಸುರೇಂದ್ರರ ಸಹೋದರ ವೇಲಾಯುಧನ್ ನೀಡಿದ ದೂರಿನ ಅನ್ವಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.