ಶನಿವಾರಸಂತೆ, ಫೆ. 22: ಇಲ್ಲಿನ ಭಾರತೀ ಪ್ರಥಮ ದರ್ಜೆ ಕಾಲೇಜು, ಎನ್‍ಎಸ್‍ಎಸ್ ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ಹಾಗೂ ಯೂತ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ತಾ. 24ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಶಿಬಿರ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೋತ್ಥಾನ ರಕ್ತನಿಧಿ ಸಂಚಾಲಕ ಎನ್. ಈಶ್ವರ್, ವಿದ್ಯಾಸಂಸ್ಥೆ ಉಪಾಧ್ಯಕ್ಷ ಎಚ್.ಪಿ. ಶೇಷಾದ್ರಿ ಕಾರ್ಯದರ್ಶಿ ಕೆ.ಎಂ. ಜಗನ್ ಪಾಲ್ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.