ಕೂಡಿಗೆ, ಫೆ. 22: ಹೆಬ್ಬಾಲೆ ಗ್ರಾಮ ಪಂಚಾಯಿತಿಯ 2017-18ನೇ ಜಮಾಬಂದಿ ಕಾರ್ಯಕ್ರಮವು ತಾ. 24 ರಂದು ಹೆಬ್ಬಾಲೆ ಸಮುದಾಯ ಭವನದಲ್ಲಿ ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎನ್. ಲತಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎನ್. ಹೇಮಂತ್‍ಕುಮಾರ್ ಆಗಮಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.