ಮಡಿಕೇರಿ, ಫೆ. 23: ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿಯಿಂದ ವೀಕ್ಷಕರನ್ನು ನೇಮಿಸಲಾಗಿದ್ದು, ವೀಕ್ಷಕರುಗಳಾದ ಮೈಸೂರಿನ ಎಂಎಲ್ಸಿ ಧರ್ಮಸೇನ್ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಬಾಲರಾಜ್ ಎರಡನೇ ಸುತ್ತಿನ ಅಭಿಪ್ರಾಯ ಸಂಗ್ರಹಕ್ಕಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಾಗಿರುವವರ ಹಾಗೂ ಕಾಂಗ್ರೆಸ್ ನಾಯಕರ ಮತ್ತು ವಲಯ ಅಧ್ಯಕ್ಷರುಗಳ ಸಭೆ ತಾ. 24 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಸೋಮವಾರಪೇಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ತಿಳಿಸಿದ್ದಾರೆ.