ಕರಿಕೆ, ಪೆ. 23: ಇಲ್ಲಿಗೆ ಸಮೀಪದ ಕರಿಕೆ ಮಂಞಡ್ಕ ಶ್ರೀತುಳೂರು ವನÀಭಗವತಿ ಕ್ಷೇತ್ರದ ವಾರ್ಷಿಕ ಜಾತ್ರೆ ಶ್ರದ್ಧಾ ಭಕ್ತಿಯಿಂದ ಜರುಗಿತು. ಕಳೆದ ಏಳು ದಿನಗಳಿಂದ ನಡೆದ ಈ ಜಾತ್ರಾ ಮಹೋತ್ಸವಕ್ಕೆ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ನೆರೆದಿದ್ದ ಭಕ್ತರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.