ಮಡಿಕೇರಿ, ಫೆ. 23 : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಿದ್ದಾಪುರ ಹೋಬಳಿ ಮಟ್ಟದ ಸಭೆ ತಾ. 26 ರಂದು ನಡೆಯಲಿದೆ ಎಂದು ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ. ರವಿ ತಿಳಿಸಿದ್ದಾರೆ.
ಸಿದ್ದಾಪುರದ ಎಸ್.ಎನ್.ಡಿ.ಪಿ. ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದಾಪುರ ಹೋಬಳಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವದು. ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ರವಿ ತಿಳಿಸಿದ್ದಾರೆ.