ಮಡಿಕೇರಿ, ಫೆ. 23: ಜಾರ್ಖಂಡ್ ರಾಜ್ಯ ಸರ್ಕಾರ ಪಿಎಫ್‍ಐ ಸಂಘಟನೆಯನ್ನು ಇತ್ತೀಚೆಗೆ ನಿಷೇಧಿಸಿದ್ದು, ನಿಷೇಧವನ್ನು ಹಿಂಪಡೆಯುವಂತೆ ಆಗ್ರಹಿಸಿ ಮಡಿಕೇರಿಯಲ್ಲಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಪ್ರತಿಭಟನಾಕಾರರು ಜಾರ್ಖಂಡ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಿಷೇಧವನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಿಎಫ್‍ಐ ಜಿಲ್ಲಾಧ್ಯಕ್ಷ ಹ್ಯಾರೀಸ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಹಾಗೂ ಇನ್ನಿತರರು ಇದ್ದರು.