ಮಡಿಕೇರಿ, ಫೆ. 23: ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆ ಯಾಗಿರುವದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ.ರಾ.ರ.ಸಾ. ನಿಗಮವು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕ 1.3.2018 ರಿಂದ 17.3.2018ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸ ಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆ.ಎಸ್.ಆರ್.ಟಿ.ಸಿ. ಮುಖ್ಯ ಸಂಚಾರ ವ್ಯವಸ್ಥಾಪಕರು (ವಾ) (ಪ್ರ) ತಿಳಿಸಿದ್ದಾರೆ.