ಮಡಿಕೇರಿ, ಫೆ. 24: ತಾ. 27ರಂದು ಪೂರ್ವಾಹ್ನ 10.30 ಗಂಟೆಗೆ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ 2018-19ನೇ ಸಾಲಿನಲ್ಲಿ ಚುನಾವಣೆ ಸಂಬಂಧ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ವ್ಯವಸ್ಥಾಪಕರುಗಳಿಗೆ ಸಹಕಾರಿ ಚುನಾವಣೆ ಕುರಿತಾದ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಹಕಾರಿ ಚುನಾವಣೆ ಬಗ್ಗೆ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಆರ್. ಲೋಕೇಶ್ ಉಪನ್ಯಾಸ ನೀಡಲಿದ್ದಾರೆ.