ಸೋಮವಾರಪೇಟೆ,ಮಾ.5: ತಾಲೂಕಿನ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಎ ಗ್ರಾಮದ ಮೊರಾರ್ಜಿ ವಸತಿ ಶಾಲಾ ರಸ್ತೆ ಕಾಮಗಾರಿಯನ್ನು ಜಿ.ಪಂ. ಸದಸ್ಯೆ ಕುಮುದ ಧರ್ಮಪ್ಪ ಪರಿಶೀಲಿಸಿದರು.
ಕಳೆದ ಅನೇಕ ವರ್ಷಗಳಿಂದ ಗುಂಡಿ ಬಿದ್ದಿದ್ದ ರಸ್ತೆಯನ್ನು ಇದೀಗ ಡಾಮರೀಕರಣ ಮಾಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಯಾವದೇ ಹಂತದಲ್ಲೂ ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಅಭಿಯಂತರ ಪೀಟರ್ ಅವರಿಗೆ ಸೂಚಿಸಿದ ಕುಮುದ ಧರ್ಮಪ್ಪ, ಸಾರ್ವಜನಿಕರು ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯೆ ಶೈಲಜಾ, ಗೌತಮ್ ಶಿವಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಸಲೀಂ ಸೇರಿದಂತೆ ಇತರರು ಉಪಸ್ಥಿತರಿದ್ದರು.