ಮಡಿಕೇರಿ, ಮಾ. 5: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2018-19 ನೇ ಶೈಕ್ಷಣಿಕ ಸಾಲಿನ 9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 19, ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಟಿvshq.oಡಿg ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.