ಮಡಿಕೇರಿ, ಮಾ. 5: ಅರಣ್ಯ ಸಂರಕ್ಷಣಾಧಿಕಾರಿಯಾಗಿ ನಾಗರಹೊಳೆ ಅಭಯಾರಣ್ಯದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಡಾನೆ ಧಾಳಿಗೆ ತುತ್ತಾಗಿ ಮೃತಪಟ್ಟ ಎಸ್. ಮಣಿಕಂಠನ್ ಅವರ ನಿಧನಕ್ಕೆ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎರಡು ನಿಮಿಷ ಮೌನಾಚರಣೆ ಮಾಡಿ ಶ್ರಂದ್ಧಾಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಮಾತನಾಡಿ, 2001 ರಲ್ಲಿ ಭಾರತೀಯ ಅರಣ್ಯ ಸೇವೆಗೆ ಸೇರಿದ ಮಣಿಕಂಠನ್ ಅವರು ಅರಣ್ಯ ಇಲಾಖೆಯಲ್ಲಿ ಉತ್ತಮ ಜನಪರ ಸೇವೆ ಸಲ್ಲಿಸಿ ಇತರರಿಗೆ ಮಾದರಿಯಾಗಿದ್ದರು. ಜೊತೆಗೆ ಸೇವಾ ದಕ್ಷತೆಗೆ ಹೆಸರಾಗಿದ್ದರು ಎಂದು ಅವರು ಸ್ಮರಿಸಿದರು. ನಾನಾ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.