ಸೋಮವಾರಪೇಟೆ, ಮಾ. 10: 5ನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ತಥಾಸ್ತು ಸಾತ್ವಿಕ ಸಂಸ್ಥೆ ನಡೆಸಿದ ಅಂಚೆ ಮೂಲಕ ‘ನನ್ನವರು’ ವಿಷಯದ ಕಥಾ ಸ್ಪರ್ಧೆಯಲ್ಲಿ ಕುಶಾಲನಗರದ ದಿನಮಣಿ ಹೇಮರಾಜು ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಸ್ಥಾನವನ್ನು ಮಡಿಕೇರಿಯ ಆಶಾ ಧರ್ಮಪಾಲ್ ಪ್ರಭು, ತೃತೀಯ ಸ್ಥಾನವನ್ನು ಬೆಳ್ತಂಗಡಿಯ ಕೆ. ಸೌಜನ್ಯ ಪಡೆದಿದ್ದಾರೆ. ಕನ್ನಡ ಸಾಹಿತ್ಯಾಸಕ್ತಿಯನ್ನು ಎಲ್ಲರಲ್ಲೂ ಮೂಡಿಸುವ ಉದ್ದೇಶದಿಂದ ಅಂಚೆ ಮೂಲಕ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಮುಂದಿನ ದಿನಗಳಲ್ಲಿಯೂ ಕನ್ನಡ ಭಾಷೆ, ಸಾಹಿತ್ಯಕ್ಕೆ ಸಂಬಂಧಿಸಿದಂತೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದು ಎಂದು ತಥಾಸ್ತು ಸಂಸ್ಥೆಯ ಅಧ್ಯಕ್ಷ ರವೀಂದ್ರ ಹಾನಗಲ್ಲು ತಿಳಿಸಿದ್ದಾರೆ.