ಮಡಿಕೇರಿ, ಮಾ. 11: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಜಿಲ್ಲಾ ಸಮಿತಿ ಸಭೆಯು ತಾ. 13ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಚಿವ, ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಬಿ.ಎ. ಜೀವಿಜಯ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಸಮಿತಿ ಕ್ಷೇತ್ರ ಸಮಿತಿಯ ಎಲ್ಲಾ ಪಾಧಿಕಾರಿಗಳು ಹೋಬಳಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.