ಮಡಿಕೇರಿ, ಮಾ.11 : ಬೇಂಗೂರು ಚೇರಂಬಾಣೆ ಗ್ರಾಮದಲ್ಲಿ ತಾ.13 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವದೆಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎಸ್. ರಮಾನಾಥ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ವಿಷೇಶ ನಿಧಿಯಡಿ ಚೇರಂಬಾಣೆಯಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಂ.ಪದ್ಮಿನಿ ಪೆÇನ್ನಪ್ಪ ಅವರ ವಿಶೇಷ ಆಸಕ್ತಿಯಲ್ಲಿ “ಹೊಗೆ ಮುಕ್ತ ಕೊಡಗು (ಸೌದೆ ರಹಿತ ಅಡುಗೆ)” ಎಂಬ ಪರಿಕಲ್ಪನೆ ಯೊಂದಿಗೆ... ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ವಿತರಣೆಯನ್ನು ಬೆಳಗ್ಗೆ 11.30ಕ್ಕೆ ಚೇರಂಬಾಣೆ ಕೊಡವ ಸಮಾಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ರೇಷ್ಮೆ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವುಮಾದಪ್ಪ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ರಮಾನಾಥ್ ತಿಳಿಸಿದ್ದಾರೆ.