ಒಡೆಯನಪುರ, ಮಾ. 11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೊಡಗು ಜಿಲ್ಲಾ ಘಟಕ, ಸುಳ್ಯದ ಜಿಲ್ಲಾ ಮಟ್ಟದ ಮಹಿಳಾ ವ್ಯವಸ್ಥಾಪನಾ ಸಮಿತಿ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2018ನೇ ಸಾಲಿನ ಜಿಲ್ಲಾಮಟ್ಟದ ಸಾಧಕಿ ಪ್ರಶಸ್ತಿಯನ್ನು ಹಲವಾರು ವರ್ಷಗಳಿಂದ ಟೈಲರಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಶನಿವಾರಸಂತೆ ನಿವಾಸಿ ತಾಸೀನ ತಾಜ್ ಅವರಿಗೆ ದೊರೆತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ತಾಸೀನ ತಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.