ಮಡಿಕೇರಿ, ಮಾ. 12: ವೀರಾಜಪೇಟೆ ತಾಲೂಕು ಪಂಚಾಯಿತಿಯ ತಾ. 13 ರಂದು (ಇಂದು) ತಾಲೂಕು ಪಂಚಾಯಿತಿ ಸಭಾಂಗಣ ಪೊನ್ನಂಪೇಟೆಯಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಸಭೆಯ ಮುಂದಿನ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವದು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.