ಸೋಮವಾರಪೇಟೆ, ಮಾ. 13: ಇಲ್ಲಿನ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷರಾಗಿ ಆರ್. ಮೋಹನ್ ಕುಮಾರ್ ಪುನರಾಯ್ಕೆಯಾಗಿದ್ದಾರೆ.
ಸ್ಥಳೀಯ ಕೊಡವ ಸಮಾಜದಲ್ಲಿ ನಡೆದ ವಾರ್ಷಿಕ ಮಹಾಸಭೆಯ ನಂತರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಆರ್. ಮೋಹನ್ ಕುಮಾರ್, ಉಪಾಧ್ಯಕ್ಷರಾಗಿ ಫಾರೂಕ್, ಖಜಾಂಚಿಯಾಗಿ ಮಹಮ್ಮದ್ ಶಫಿ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ್ ಹಾಗೂ ಸಹ ಕಾರ್ಯದರ್ಶಿಯಾಗಿ ಜನಾರ್ಧನ್ ಅವರುಗಳು ಅವಿರೋಧವಾಗಿ ಆಯ್ಕೆಯಾದರು. ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್, ಕಸಾಪ ನಿಕಟಪೂರ್ವ ಅಧ್ಯಕ್ಷ ಹೆಚ್.ಜೆ. ಜವರಪ್ಪ ಅವರುಗಳು ಆಯ್ಕೆ ಪ್ರಕ್ರಿಯೆ ನಡೆಸಿದರು.