ಮಡಿಕೇರಿ, ಮಾ. 13: ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ರಚಿಸಿರುವ “ದಿವಾನ್ ಚೆಪ್ಪುಡಿರ ಪೊನ್ನಪ್ಪ’’ ಕೃತಿ ಬಿಡುಗಡೆ ಕಾರ್ಯಕ್ರಮ ತಾ. 18 ರಂದು ನಡೆಯಲಿದೆ.
ಕೊಡವ ಮಕ್ಕಡ ಕೂಟ ಹಾಗೂ ಚೆಪ್ಪುಡಿರ ಕುಟುಂಬದ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಚೆಪ್ಪುಡಿರ ಕುಟುಂಬದ ಪಟ್ಟೆದಾರ ಚೆಪ್ಪುಡಿರ ಕೆ. ಅಯ್ಯಪ್ಪ ವಹಿಸಲಿದ್ದು, ಅವರೇ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅತಿಥಿಗಳಾಗಿ ಭಾಗವಹಿಲಿದ್ದಾರೆ.