ನಾಪೆÇೀಕ್ಲು, ಮಾ. 13: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಪುಲಿಕೋಟು ಗ್ರಾಮದಲ್ಲಿ ಅಳವಡಿಸಲಾದ ನೂತನ ಟ್ರಾನ್ಸ್‍ಫಾರ್ಮರ್ ಅನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಈ ಭಾಗದ ಜನರು ನಿರಂತರ ವೋಲ್ಟೇಜ್ ಸಮಸ್ಯೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನೂತನ ಟ್ರಾನ್ಸ್‍ಫಾರ್ಮರ್ ಅಳವಡಿಸಲು ಕ್ರಮಕೈಗೊಳ್ಳುವಂತೆ ಶಾಸಕರಲ್ಲಿ ಮನವಿ ಮಾಡಲಾಗಿತ್ತು. ಅದಕ್ಕೆ ಸ್ಪಂದಿಸಿದ ಅವರು ಸಮಸ್ಯೆಯನ್ನು ಇಲಾಖಾಧಿಕಾರಿಗಳಿಗೆ ಮನದಟ್ಟು ಮಾಡಿ ಟ್ರಾನ್ಸ್‍ಫಾರ್ಮರ್ ಅಳವಡಿಕೆಗೆ ನೆರವಾಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ, ಉಪಾಧ್ಯಕ್ಷೆ ಚೋಕಿರ ದೇವಕಿ, ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್, ತಳೂರು ಕಿಶೋರ್ ಕುಮಾರ್, ಮತ್ತಿತರರಿದ್ದರು.