ನಾಪೆÇೀಕ್ಲು, ಮಾ. 13: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಳ್ಳೆಟ್ಟಿ ಮತ್ತು ಇತರ ಹೊಳೆಯ ಬದಿ ಕಿಡಿಗೇಡಿಗಳು ತ್ಯಾಜ್ಯ ಸುರಿಯುತ್ತಿದ್ದು, ನಾಗರಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತ್ಯಾಜ್ಯ ಹಾಕುವವರ ವಿರುದ್ಧ ಗ್ರಾಮ ಪಂಚಾಯಿತಿ ವತಿಯಿಂದ ಪೆÇಲೀಸರಿಗೆ (ಮೊದಲ ಪುಟದಿಂದ) ದೂರು ನೀಡಲಾಗುವದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ತಿಳಿಸಿದ್ದಾರೆ.ಕೋಳಿ, ಮಾಂಸ ಮತ್ತಿತರ ತ್ಯಾಜ್ಯ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಳೆಯ ನೀರು ಕಲುಷಿತಗೊಂಡು ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ನೀರಿನ ಬಳಕೆಯಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಭೀತಿ ಉಂಟಾಗಿದೆ. ಈ ಕೃತ್ಯ ಎಸಗುತ್ತಿರುವವರ ವಿರುದ್ಧ ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಇಂತಹ ಪ್ರಕರಣ ನಡೆದಿದ್ದು, ಈಗ ಮತ್ತೆ ಮರುಕಳಿಸಿದೆ. ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ನಾಪೆÇೀಕ್ಲು ಪೆÇಲೀಸ್ ಠಾಣೆಯಲ್ಲಿ ದೂರು ನೀಡಲಾಗುವದು ಎಂದು ಎಚ್ಚರಿಸಿದರು.