ಕೂಡಿಗೆ, ಮಾ. 13: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ಲಕ್ಷ ರೂ ವೆಚ್ಚದಲ್ಲಿ ಕೂಡ್ಲೂರು ಜಂಕ್ಷನ್‍ನಿಂದ ಹಳ್ಳಿಮನೆಗೆ ತೆರಳುವ ರಸ್ತೆಯ ಕಾಮಗಾರಿ ನಡೆದಿದ್ದು, ಕಾಮಗಾರಿ ನಡೆದ 7 ದಿನಗಳಲ್ಲೇ ರಸ್ತೆ ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಕಾಮಗಾರಿ ಮಾಡುವ ಸಂದರ್ಭ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಾಣ ಮಾಡದೆ ರಸ್ತೆಗೆ ಡಾಂಬರೀಕರಣ ಆದ ನಂತರ ಚರಂಡಿ ಕಾಮಗಾರಿ ನಡೆಸಲು ಪ್ರಾರಂಭಿಸಿದ ಸಂದರ್ಭ ರಸ್ತೆಯಲ್ಲಿ ಬಿರುಕು ಮತ್ತು ಕುಸಿತ ಸಂಭವಿಸಿದೆ. ಇದರಿಂದ ಈ ವ್ಯಾಪ್ತಿಯ ಗ್ರಾಮಸ್ಥರು ಕಾಮಗಾರಿಯ ಬಗ್ಗೆ ಆಕ್ರೋಶಗೊಂಡು ಮರು ಡಾಂಬರೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.