ಮಡಿಕೇರಿ, ಮಾ. 13: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ತಾ. 16 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾಲೇಜು ಆವರಣದಲ್ಲಿ ನಡೆಯಲಿದೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಲೋಲಿಟ ಸಿ, ಸಾಹಿತಿಗಳಾದ ನಾಗೇಶ್ ಕಾಲೂರು ಮತ್ತು ಇತರರು ಭಾಗವಹಿಸಲಿದ್ದಾರೆ.