ಸೋಮವಾರಪೇಟೆ, ಮಾ. 13: ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ಯುವಕ ಸಂಘದ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ರಾಜ್ಯಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ತಾ. 18ರಂದು ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಪ್ರವೀಣ್ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಿಶೋರ್‍ಕುಮಾರ್ ವಹಿಸಲಿದ್ದು, ಭಾಗವಹಿಸುವ ತಂಡಗಳು ತಾ. 18ರ ಬೆಳಿಗ್ಗೆ 9 ಗಂಟೆಯೊಳಗೆ ಸ್ಥಳದಲ್ಲೇ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಪ್ರವೀಣ್ ಮನವಿ ಮಾಡಿದ್ದಾರೆ.